ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯಕ್ಕಾಗಿ ಹೋರಾಟ ನಡೆಸಿದ ವ್ಯಕ್ತಿ ಅಂಬೇಡ್ಕರ್ : ಹರೀಶ್ ಕುಮಾರ್

Update: 2021-12-06 14:30 GMT

ಮಂಗಳೂರು, ಡಿ.6: ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ. ಅಂಬೇಡ್ಕರ್  ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನವನ್ನು ಸೋಮವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಚರಿಸಿದ ಸಂದರ್ಭದಲ್ಲಿ ಅವರು ಅಧ್ಯಕ್ಷ ತೆ ವಹಿಸಿ ಮಾತನಾಡುತ್ತಿದ್ದರು.

ಅಂಬೇಡ್ಕರ್  ಅವರು ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾದ  ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಇಡೀ ಮಾನವ ಕುಲದ ಹಕ್ಕುಗಳು, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಸ್ಥಾಪನೆಗಾಗಿ ಹೋರಾಡಿದ ಮಹಾನ್ ನಾಯಕ ಅಂಬೇಡ್ಕರ್, ಜಾತ್ಯತೀತ, ಸಮಾಜವಾದಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ವಿಶ್ವಾಸ ಹೊಂದಿದ್ದರು. ಅಸಮಾನತೆಯೇ ಮೇಳೈಸುತ್ತಿದ್ದ ಕಾಲದಲ್ಲಿ ತಾನು ಅನುಭವಿಸಿದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಸಿಗಬಾರದು ಅನ್ನುವ ದೃಷ್ಟಿಯಿಂದ ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡನೆ ಮಾಡಿದವರು. ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಇಬ್ರಾಹೀಂ ಕೋಡಿಜಾಲ್, ಶಶಿಧರ್ ಹೆಗ್ಡೆ, ಕೆ. ಹರಿನಾಥ್, ಲುಕ್ಮಾನ್ ಬಂಟ್ವಾಳ, ಶಾಲೆಟ್ ಪಿಂಟೊ, ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಪದ್ಮನಾಭ ನರಿಂಗಾನ, ಸುರೇಂದ್ರ ಕಂಬಳಿ, ಸದಾಶಿವ ಶೆಟ್ಟಿ, ಪ್ರಕಾಶ್ ಸಾಲ್ಯನ್, ಅಪ್ಪಿ, ಟಿ.ಹೊನ್ನಯ್ಯ, ಅಬ್ದುಲ್ ರವೂಫ್, ಮಲಾಲ್ ಮೋನು, ಪದ್ಮನಾಭ ಅಮೀನ್, ರಹಿಮಾನ್ ಭಟ್ಕಳ್, ವಿವೇಕ್ ರಾಜ್ ಪೂಜಾರಿ, ಉಮ್ಮರ್ ಫಾರೂಕ್, ನವೀನ್ ಡಿಸೋಜಾ, ಡಿ.ಕೆ.ಅಶೋಕ್, ಸಂಶುದ್ದೀನ್ ಕುದ್ರೋಳಿ, ಸಂಶುದ್ದೀನ್ ಬಂದರ್, ಲತೀಫ್ ಕಂದಕ್, ಮಿಥುನ್ ಕುಮಾರ್, ಶಬ್ಬೀರ್ ಎಸ್,.ಟಿ.ಕೆ. ಸುಧೀರ್, ನಝೀರ್ ಬಜಾಲ್, ಪ್ರೇಮ್ ಬಳ್ಳಾಲ್ ಭಾಗ್, ಗಿರೀಶ್ ಶೆಟ್ಟಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಮೆಲ್ವಿನ್ ಡಿಸೋಜಾ, ಚೇತನ್ ಬೆಂಗ್ರೆ, ರಮಾನಂದ ಪೂಜಾರಿ, ಮಲ್ಲಿಕಾರ್ಜುನ ಕೋಡಿಕಲ್, ಹರ್ಬಟ್ ಡಿಸೋಜಾ, ಶಾಂತಲಾ ಗಟ್ಟಿ, ಇಂದಿರಾ ಅತ್ತಾವರ, ಮೊಹಮ್ಮ ದ್  ಬಪ್ಪಳಿಗೆ, ಸಲೀಂ ಪಾಂಡೇಶ್ವರ, ಸೌಹಾನ್ ಎಸ್.ಕೆ, ಫಯಾಝ್ ಅಮ್ಮೆಮ್ಮಾರ್, ಹಸನ್ ಫಳ್ನೀರ್, ಲಕ್ಷ್ಮಣ್ ಶೆಟ್ಟಿ, ಶ್ವಾನ್ ಡಿಸೋಜ, ಯಶವಂತ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News