ಅರಣ್ಯ ಇಲಾಖೆ: ಡಿ.11ರಂದು ಹೊಸ ವರ್ಷದ ಡೈರಿ ಬಿಡುಗಡೆ

Update: 2021-12-06 17:00 GMT

ಉಡುಪಿ, ಡಿ. 6: ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತ ಅರಣ್ಯ ರಕ್ಷಕರು ಮತ್ತು ವೀಕ್ಷಕರು, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಡಿ.11ರಂದು ಬೆಳಗ್ಗೆ 10:30ಕ್ಕೆ ನಗರದ ಕಿದಿಯೂರು ಹೋಟೆಲ್‌ನ ಶೇಷಶಯನ ಹಾಲ್‌ನಲ್ಲಿ ನಡೆಯಲಿದೆ.

ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯ ಅರಣ್ಯ ರಕ್ಷಕ-ವೀಕ್ಷಕ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಾಲ್ಕರ್, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಎಂ., ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಪಿ, ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ, ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಜಿ.ಡಿ. ದಿನೇಶ್, ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ, ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ ಮಂಗಳೂರು ವೃತ್ತದ ಅಧ್ಯಕ್ಷ ಜಗದೀಶ್ ಕೆ.ಎನ್, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಗೌರವಾಧ್ಯಕ್ಷ ಎಚ್. ದೇವರಾಜ ಪಾಣ ಹಾಗೂ ಗೌರವ ಸಲಹೆಗಾರ ಗಣಪತಿ ನಾಯಕ್ ಭಾಗವಹಿಸಲಿರುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News