ಬಾಬರಿ ಮಸೀದಿ ಧ್ವಂಸಕರಿಗೆ ಶಿಕ್ಷೆಯಾಗಲಿ: ವೆಲ್ಫೇರ್ ಪಾರ್ಟಿ

Update: 2021-12-06 17:39 GMT

ಭಟ್ಕಳ: ಬಾಬರಿ ಮಸೀದಿ ಧ್ವಂಸ ಪ್ರಕರಣ ಕ್ರಿಮಿನಲ್ ಅಪರಾಧವಾಗಿದೆ ಎಂದು ಹೇಳಿರುವ ನ್ಯಾಯಾಲಯ ಅಪರಾಧಿಗಳನ್ನು ಶಿಕ್ಷಿಸುವಲ್ಲಿ ವಿಫಲಗೊಂಡಿದೆ. ಸಂವಿಧಾನದ ಸಂರಕ್ಷಣೆ ಮತ್ತು ಮುಸ್ಲಿಮರು ಸೇರಿದಂತೆ ಎಲ್ಲಾ ನಾಗರಿಕರಿಗೆ ನ್ಯಾಯವನ್ನು ಖಾತರಿಪಡಿಸುವ ಗೌರವಾನ್ವಿತ  ನ್ಯಾಯಾಲಯವು ಬಾಬರಿ ಮಸೀದಿ ವಿಷಯದಲ್ಲಿ  ವಿಚಿತ್ರ ತೀರ್ಪನ್ನು ನೀಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ನ್ಯಾಯವಾದಿ ತಾಹೇರ್ ಹುಸೇನ್ ಹೇಳಿದ್ದಾರೆ.

ಅವರು ಸೋಮವಾರ ಬಾಬರಿ ಧ್ವಂಸಕರಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಉನ್ನತ ನ್ಯಾಯಾಲಯದಲ್ಲಿ ಸಿಬಿಐ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲು ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ಭಾರತದ ರಾಷ್ಟ್ರಪತಿಗಳು ಹಸ್ತಕ್ಷೇಪ ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಪತಿಗಳಿಗೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್,  ರಾಜ್ಯ ಕಾರ್ಯದರ್ಶಿ ಅಜೀಜ್ ಜಾಗೀರ್ದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಖ್, ಅಸ್ಲಂ ಶೇಖ್, ಅಬ್ದುಲ್ ಜಬ್ಬಾರ್ ಅಸದಿ, ಶೌಕತ್ ಖತೀಬ್ ಮುಂತಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News