​ಮುಂಬೈ : ಮತ್ತೆರಡು ಒಮೈಕ್ರಾನ್ ಪ್ರಕರಣ ದೃಢ

Update: 2021-12-07 02:33 GMT
ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರ ರಾಜಧಾನಿಯಲ್ಲಿ ಮತ್ತೆರಡು ಒಮೈಕ್ರಾನ್ ಪ್ರಭೇದದ ಕೊರೋನ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಆದರೆ ಇಬ್ಬರಲ್ಲೂ ಯಾವುದೇ ರೋಗಲಕ್ಷಣ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ದೇಶದ ಒಟ್ಟು ಐದು ರಾಜ್ಯಗಳಲ್ಲಿ ಒಮೈಕ್ರಾನ್ ಪ್ರಭೇದದ ಕೊರೋನ ವೈರಸ್ ಸೋಂಕಿತರ ಸಂಖ್ಯೆ 23ಕ್ಕೇರಿದೆ.

ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಆಗಮಿಸಿದ 37 ವರ್ಷದ ವ್ಯಕ್ತಿಯೊಬ್ಬರಿಗೆ ಮತ್ತು ಅಮೆರಿಕದಿಂದ ಆಗಮಿಸಿದ 36 ವರ್ಷ ವಯಸ್ಸಿನ ಸ್ನೇಹಿತನಿಗೆ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಒಮೈಕ್ರಾನ್ ಸೋಂಕಿತರ ಸಂಖ್ಯೆ 10 ಆಗಿದೆ.

ಈ ಇಬ್ಬರು ಸೋಂಕಿತರು ಈ ಮೊದಲು ಕೋವಿಡ್-19 ಲಸಿಕೆ ಪಡೆದಿದ್ದು, ಇಬ್ಬರಲ್ಲೂ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಐದು ಅತ್ಯಧಿಕ ಅಪಾಯ ಸಾಧ್ಯತೆಯ ಹಾಗೂ 315 ಕಡಿಮೆ ಅಪಾಯ ಸಾಧ್ಯತೆಯ ಸಂಪರ್ಕಗಳನ್ನು ಪತ್ತೆ ಮಾಡಲಾಗಿದೆ. ರೋಗಿಗಳ ಇತರ ಸಂಪರ್ಕಗಳನ್ನು ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಕರ್ನಾಟಕ ಮತ್ತು ದೆಹಲಿಯಲ್ಲಿ ಈಗಾಗಲೇ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಮೊದಲ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ಕಳೆದ ವಾರ ಪತ್ತೆಯಾಗಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News