ಕಲ್ಲಡ್ಕ: ಬ್ಲಡ್ ಡೋನರ್ಸ್ ವತಿಯಿಂದ ರಕ್ತದಾನ ಶಿಬಿರ

Update: 2021-12-07 09:10 GMT

ಕಲ್ಲಡ್ಕ: ಝಾಮಾನ್ ಬಾಯ್ಸ್ ಕಲ್ಲಡ್ಕ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಕಂಕನಾಡಿ ಮಂಗಳೂರು ಇವರ ಸಹಯೋಗದೊಂದಿಗೆ ಸರ್ಕಾರಿ ಶಾಲೆ ಕಲ್ಲಡ್ಕ ಇದರ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.

ಈ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪಂಡಿತರು, ಊರಿನ ಹಿರಿಯ ನಾಯಕರು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಝಮಾನ್ ಬಾಯ್ಸ್ ಕಲ್ಲಡ್ಕ ಇದರ ನೂತನ ಸಮವಸ್ತ್ರ ಬಿಡುಗಡೆಗೊಳಿಸಲಾಯಿತು.

ಸುಮಾರು 65 ಕ್ಕೂ ಹೆಚ್ಚು ರಕ್ತದಾನಿಗಳು ಬಂದು ರಕ್ತದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News