ಬೆಂಗಳೂರು: ಮಾಸ್ಕ್ ವಿಚಾರಕ್ಕೆ ಪೊಲೀಸ್ ಮೇಲೆ ಹಲ್ಲೆ; ಆರೋಪ

Update: 2021-12-07 16:48 GMT

ಬೆಂಗಳೂರು, ಡಿ.7: ಮಾಸ್ಕ್ ಧರಿಸುವ ವಿಚಾರಕ್ಕೆ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಸಬ್‌ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಆರೋಪ ಸಂಬಂಧ ಇಲ್ಲಿನ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ರಾತ್ರಿ ಗಸ್ತಿನಲ್ಲಿರುವಾಗ ಯಲಹಂಕದ ಚಿಕ್ಕಬೆಟ್ಟಹಳ್ಳಿ ಬಳಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಯುವಕರನ್ನು ಕಂಡ ಪೊಲೀಸರು, ಮಾಸ್ಕ್ ಧರಿಸಿ ಎಂದು ಗದರಿಸಿದ್ದಾರೆ. ಈ ವೇಳೆ ಸ್ಥಳೀಯ ಯುವಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News