ಎಸಿಬಿ ದಾಳಿಗೆ ಗುರಿಯಾಗಿದ್ದ ನಾಲ್ವರು ಸರಕಾರಿ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲು

Update: 2021-12-07 12:27 GMT

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪ ಸಂಬಂಧ ಇತ್ತೀಚಿಗೆ ಎಸಿಬಿ ದಾಳಿಗೆ ಗುರಿಯಾಗಿದ್ದ ನಾಲ್ವರು ಸರಕಾರಿ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ.

ಯಲಹಂಕ ಸರಕಾರಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ಡಾ. ಎಸ್.ಎನ್.ನಾಗರಾಜ್, ಮಾರಪ್ಪಪಾಳ್ಯದ ಬಿಬಿಎಂಪಿ ಶಾಲೆಯ ಡಿ ಗ್ರೂಪ್ ನೌಕರ ಗಿರಿ, ಸಕಾಲ ಇಲಾಖೆಯ ಆಡಳಿತಾಧಿಕಾರಿ ಎಲ್.ಸಿ.ನಾಗರಾಜ್, ಬಿಬಿಎಂಪಿ ಕೇಂದ್ರ ಕಚೇರಿಯ ಪ್ರಥಮದರ್ಜೆ ಸಹಾಯಕ ಮಾಯಣ್ಣ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಂ13(1), 13(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಉಳಿದಂತೆ 11 ಸರಕಾರಿ ಅಧಿಕಾರಿಗಳ ಮೇಲೂ ಆಯಾ ಜಿಲ್ಲಾ ಎಸಿಬಿಯಿಂದ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೆ, ಇತ್ತೀಚೆಗೆ ರಾಜ್ಯಾದ್ಯಂತ 15 ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿ 60ಕ್ಕಿಂತ ಹೆಚ್ಚು ಕಡೆಗಳಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News