ಬೆಂಗಳೂರು: ಕ್ವಾರಂಟೈನ್ ಬಳಿಕವೂ ಒಮೈಕ್ರಾನ್ ಸೋಂಕಿತನಿಗೆ ಕೊರೋನ ಪಾಸಿಟಿವ್

Update: 2021-12-07 12:53 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ನಗರದ 46 ವರ್ಷ ವಯಸ್ಸಿನ ವೈದ್ಯರಿಗೆ ಒಮೈಕ್ರಾನ್ ಸೋಂಕು ದೃಢಪಟ್ಟಿತ್ತು. ಆದುದರಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಯೊಂದಿಗೆ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆದರೆ, 14 ದಿನಗಳ ಕ್ವಾರಂಟೈನ್ ಮುಗಿದ ಬಳಿಕ ಕೊರೋನ ಪಾಸಿಟಿವ್ ದೃಢವಾಗಿದೆ.  

ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ ಸಂಸ್ಥೆ ನಡೆಸಿದ್ದ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದ ಇವರಿಗೆ ಒಮೈಕ್ರಾನ್ ಸೋಂಕು ದೃಢಪಟ್ಟಿತ್ತು. ಹೀಗಾಗಿ, ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ, 14 ದಿನಗಳ ಕ್ವಾರಂಟೈನ್ ಮುಗಿಸಿದ್ದರೂ ಸೋಮವಾರದಂದು ನಡೆಸಿದ ಆರ್‌ಟಿಪಿಸಿಆರ್ ಪರೀಕ್ಷೆಯ ರಿಪೋರ್ಟ್ ನಲ್ಲಿ ಕೊರೋನ ಪಾಸಿಟಿವ್ ದೃಢವಾಗಿದೆ.  

ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ವೈದ್ಯರ ಜೊತೆಗಿದ್ದ ಉಳಿದ ಮೂವರು ವೈದ್ಯರ ಕೊವೀಡ್ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಅವರ ಜಿನೋಮ್ ಸೀಕ್ವೆನ್ಸಿಂಗ್ ವರದಿ ಬರುವವರೆಗೆ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಕ್ವಾರೈಂಟೈನ್ ಮಾಡಲಾಗುವುದು. ಜೀನೋಮ್ ಸೀಕ್ವೆನ್ಸಿಂಗ್ ವರದಿಯಲ್ಲೂ ನೆಗಟಿವ್ ಬಂದರೆ ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡಲಾಗುವುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.  

ಒಮೈಕ್ರಾನ್ ಸೋಂಕಿತ ವೈದ್ಯನಿಗೆ ಮತ್ತೊಮ್ಮೆ ಸೋಂಕು ಪತ್ತೆಯಾದರೂ ಸೋಂಕಿನ ತೀವ್ರತೆ ಹೆಚ್ಚಾಗಿ ಕಂಡು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News