​ಉಡುಪಿ : ಮೂವರಿಗೆ ಕೋವಿಡ್ ಪಾಸಿಟಿವ್

Update: 2021-12-07 13:34 GMT

ಉಡುಪಿ, ಡಿ.7: ಜಿಲ್ಲೆಯಲ್ಲಿ ಮಂಗಳವಾರ ಮೂವರು ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಹತ್ತು ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದರೆ, ಇನ್ನೂ ಚಿಕಿತ್ಸೆಯಲ್ಲಿರುವವರ ಸಂಖ್ಯೆ 68 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಉಡುಪಿ ತಾಲೂಕಿನವರು. ಇಂದು ಪಾಸಿಟಿವ್ ಬಂದ ಮೂವರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ಸೋಂಕಿನಿಂದ ಹತ್ತು ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ ಕೊರೋನದಿಂದ ಚೇತರಿಸಿಕೊಂಡ ವರ ಸಂಖ್ಯೆ 76,396 ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2744 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,941ಕ್ಕೇರಿದೆ.

5280 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 5280 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 1026 ಮಂದಿ ಮೊದಲ ಡೋಸ್ ಹಾಗೂ 4254 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 643 ಮಂದಿ ಮೊದಲ ಡೋಸ್ ಹಾಗೂ 2945 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 383 ಮಂದಿ ಮೊದಲ ಡೋಸ್ ಹಾಗೂ 1305 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ತಲಾ ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News