ರಾಜ್ಯದಲ್ಲಿಂದು 299 ಕೊರೋನ ಪ್ರಕರಣ ದೃಢ, 6 ಮಂದಿ ಸೋಂಕಿಗೆ ಬಲಿ

Update: 2021-12-07 13:51 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಡಿ.7: ರಾಜ್ಯದಲ್ಲಿ ಮಂಗಳವಾರ 299 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 6 ಮಂದಿ ಸೋಂಕಿಗೆ ಬಲಿಯಾಗಿದ್ದು, 260 ಜನರು ಗುಣಮುಖರಾಗಿದ್ದಾರೆ.  ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,98,699ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,243ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,100ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಆರು ಜನರ ಸಾವು: ಬೆಂಗಳೂರು ನಗರ 3, ದಕ್ಷಿಣ ಕನ್ನಡ 1, ಧಾರವಾಡ 1, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 299 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 215, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ದಕ್ಷಿಣ ಕನ್ನಡ 14, ಧಾರವಾಡ 6, ಹಾಸನ 6, ಕಲಬುರಗಿ 1, ಕೊಡಗು 12, ಕೋಲಾರ 2, ಮಂಡ್ಯ 2, ಮೈಸೂರು 11, ಶಿವಮೊಗ್ಗ 4, ತುಮಕೂರು 4, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News