ಇಮಾಮ್, ಮುಅದ್ದಿನ್‌ಗಳ ಗೌರವಧನ ತಿಂಗಳ ವೇತನ ಅಲ್ಲ: ಶಾಫಿ ಸಅದಿ

Update: 2021-12-07 14:42 GMT

ಬ್ರಹ್ಮಾವರ, ಡಿ.7: ಕರ್ನಾಟಕ ವಕ್ಫ್ ಬೋರ್ಡ್ ಇಮಾಮ್ ಹಾಗೂ ಮುಅದ್ದಿನ್‌ಗಳಿಗೆ ನೀಡುವ ಗೌರವಧನವನ್ನು ಆಡಳಿತ ಮಂಡಳಿ ತಿಂಗಳ ವೇತನಕ್ಕೆ ಸೇರಿಸಬಾರದು. ಅದು ಪ್ರತ್ಯೇಕವಾಗಿ ನೀಡುವ ಗೌರವಧನ ಆಗಿದೆ. ಅದನ್ನು ತಡೆ ಹಿಡಿಯುವ ಜಮಾಅತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗು ವುದು ಎಂದು ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ತಿಳಿಸಿದ್ದಾರೆ.

ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ರವಿವಾರ ಬ್ರಹ್ಮಾವರ ಬಂಟರ ಭವನದಲ್ಲಿ ನಡೆದ ಜಮಾಅತ್ ಅದಾಲತ್ ವಿಶೇಷ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಕ್ಷುಲ್ಲಕ ಕಾರಣಕ್ಕಾಗಿ ಜಮಾಅತ್ಗಳನ್ನು ಒಡೆಯುವ ಕೆಲಸ ಸರಿಯಲ್ಲ. ಕೂತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ವಕ್ಫ್ ಬೋರ್ಡ್ ಹಾಗೂ ಇನ್ನಿತರ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಪಡೆದು ಮಸೀದಿ, ಮದ್ರಸ ಮುಂತಾದ ಧಾರ್ಮಿಕ ಕ್ಷೇತ್ರ ಗಳನ್ನು ಅಭಿವೃದ್ಧಿ ಗೊಳಿಸಲು ಮುಂದಾಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ದುವಾದೊಂದಿಗೆ ಉದ್ಘಾಟಿಸಿದರು. ಅಧ್ಯಕ್ಷತೆ ಯನ್ನು ಸಮಿತಿಯ ಅಧ್ಯಕ್ಷ ಬಿ.ಎಸ್.ಎಫ್.ರಫೀಕ್ ಗಂಗೊಳ್ಳಿ ವಹಿಸಿದ್ದರು. ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಸಮುದಾಯ ಎದುರಿಸುತ್ತಿರುವ ಸವಾಲುಗಳು ಕುರಿತು ವಿಷಯ ಮಂಡಿಸಿದರು.

ರಾಜ್ಯ ಮುಸ್ಲಿಂ ಜಮಾಅತ್ ಸದಸ್ಯ ಹಾಗೂ ಉಡುಪಿ ಜಿಲ್ಲಾ ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ಮುಸ್ಲಿಂ ಜಮಾಅತ್ನ ಸದಸ್ಯತ್ವ ಅಪೇಕ್ಷೆ ಪತ್ರವನ್ನು ಶಾಫಿ ಸಅದಿ ತಾಲೂಕು ಪದಾಧಿಕಾರಿಗಳಿಗೆ ವಿತರಿಸಿದರು.

ಅಸ್ಸಯ್ಯಿದ್ ಜುನೈದ್ ಅರ್ರಿಫಾಯಿ ತಂಙಳ್, ಸುನ್ನಿ ಕೋ-ಓಡಿನೇಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಮೂಳೂರು, ಉಲಮಾ ನಾಯಕ ಬಿ.ಎ. ಇಸ್ಮಾಯಿಲ್ ಮದನಿ, ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಕೆ.ಪಿ.ಇಬ್ರಾಹಿಂ ಮಟಪಾಡಿ, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಹಂಝತ್ ಹೆಜಮಾಡಿ, ಎಸ್‌ಜೆಎಂ ಜಿಲ್ಲಾಧ್ಯಕ್ಷ ಅಬ್ದುರ್ರಝಾಕ್ ಖಾಸಿಮಿ, ಎಸ್‌ಡಿಐ ಜಿಲ್ಲಾಧ್ಯಕ್ಷ ಸಯ್ಯದ್ ಫರೀದ್ ಉಡುಪಿ, ಎಸ್‌ಎಂಎ ಜಿಲ್ಲಾಧ್ಯಕ್ಷ ಮನ್ಸೂರ್ ಕೋಡಿ, ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಕೆಎಸ್ಎಂ ಮನ್ಸೂರ್, ಕಾರ್ಯಕ್ರಮ ಉಸ್ತುವಾರಿ ಜೆ.ಮುಷ್ತಾಕ್ ಝೈಕಾ, ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಮುಹಮ್ಮದ್ ಗೌಸ್ ಕಾರ್ಕಳ, ಶೇಖ್ ಮುಹಮ್ಮದ್ ನಯೀಮ್ ಕಟಪಾಡಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ವೈಬಿಸಿ ಬಶೀರ್ ಅಲಿ ಮೂಳೂರು ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಸುಬ್ಹಾನ್ ಅಹ್ಮದ್ ಹೊನ್ನಾಳ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಕೆ.ಎಂ.ಇಲ್ಯಾಸ್ ನಾವುಂದ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News