ವಿಧಾನ ಪರಿಷತ್ ಚುನಾವಣೆ: ಸಂತೆ, ಜಾತ್ರೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಆದೇಶ

Update: 2021-12-07 16:24 GMT

ಮೈಸೂರು,ಡಿ.7: ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆ-2021ರ ಹಿನ್ನೆಲೆಯಲ್ಲಿ 2021ರ ಡಿಸೆಂಬರ್ 10 ರಂದು ಮತದಾನ ನಡೆಯುವ ಅಂಗವಾಗಿ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನವು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ದಂಡ ಪ್ರಕ್ರಿಯಾ ಸಂಹಿತೆ (ಸಿ.ಆರ್.ಪಿ.ಸಿ) 1973 ಸೆಕ್ಷನ 144 ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರ ಚಲಾಯಿಸಿ ಮೈಸೂರು ಜಿಲ್ಲೆಯಾದ್ಯಂತ 2021ರ ಡಿಸೆಂಬರ್ 9 ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News