ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2021-12-07 16:34 GMT

ಮಣಿಪಾಲ, ಡಿ.7: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 80 ಬಡಗುಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿ ಜಯಲಕ್ಷ್ಮೀ ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಡಿ.6ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಮಾನಸಿಕ ಅಸ್ವಸ್ಥತೆ ಹಾಗೂ ಕೈಸಾಲ ತೀರಿಸಲಾಗದ ಚಿಂತೆಯಲ್ಲಿ ಡಿ.5ರಂದು ಬಚ್ಚಲು ಮನೆಯ ಕಬ್ಬಿಣದ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರಂಗ್ರಪಾಡಿಯ ಕುಮಾರ್(28) ಎಂಬವರು ಡಿ.7ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News