‘ಉಡುಪಿ ಕೇದಾರ ಕಜೆ’ ಸಾವಯವ ಕುಚ್ಚಲಕ್ಕಿ ಸಮರ್ಪಣೆ

Update: 2021-12-07 16:49 GMT

ಉಡುಪಿ, ಡಿ.7: ಉಡುಪಿಯ ಕೇದಾರೊತ್ಥಾನ ಟ್ರಸ್ಟ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನ ದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ‘ಉಡುಪಿ ಕೇದಾರ ಕಜೆ’ ಇಂದು ಉಡುಪಿ ಶ್ರೀಕೃಷ್ಣ ದೇವರಿಗೆ ಸಮರ್ಪಿಸಲಾಯಿತು.

ಸುಮಾರು 100 ಕೆ.ಜಿ. ಭತ್ತವನ್ನು ಬೆಳ್ತಿಗೆ ಅಕ್ಕಿಯನ್ನಾಗಿ ಮಾಡಿ ಕೇದಾ ರೋತ್ಥಾನ ಟ್ರಸ್ಟ್ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್, ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೋಲೂರು ಆರ್ಯ ಈಡಿಗ ಸಂಸ್ಥಾನದ ಶ್ರೀವಿಖ್ಯಾತಾ ನಂದ ಸ್ವಾಮೀಜಿ, ಕೇದಾರೋತ್ಥಾನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಟ್ರಸ್ಟ್‌ನ ಸದಸ್ಯ ಬಿರ್ತಿ ರಾಜೇಶ್ ಶೆಟ್ಟಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News