ಸೈಬರ್ ಕ್ರೈಮ್ ಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ: ನಿರಂಜನ್ ಗೌಡ

Update: 2021-12-07 17:00 GMT

ಕುಂದಾಪುರ, ಡಿ.7: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಠಾಣಾ ಪೊಲೀಸ್ ಉಪನಿರೀಕ್ಷಕ ನಿರಂಜನ್ ಗೌಡ ಬಿ.ಎಸ್. ಮಾತನಾಡಿ, ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಮ್ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರರಾವ್ ಮದಾನೆ, ಉಪಪ್ರಾಂಶು ಪಾಲರು, ಅಕಾಡೆಮಿಕ್ ಡೀನ್, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು. ವಿದ್ಯಾರ್ಥಿ ಪ್ರಥಮ್ ರಾಯ್ಕರ್ ಸ್ವಾಗತಿಸಿದರು. ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ದೀಪಕ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News