ಕಳೆದ 3 ವರ್ಷಗಳಲ್ಲಿ ಮುದ್ರಣ,ಎಲೆಕ್ಟ್ರಾನಿಕ್ ಮಾಧ್ಯಮಗಳ ಜಾಹೀರಾತಿಗಾಗಿ 1700 ಕೋ.ರೂ. ಖರ್ಚು: ಕೇಂದ್ರ ಸರಕಾರ

Update: 2021-12-07 17:37 GMT

ಹೊಸದಿಲ್ಲಿ: ಕಳೆದ 3 ವರ್ಷಗಳಲ್ಲಿ ಮುದ್ರಣ, ಎಲೆಕ್ಟ್ರಾನಿಕ್ ಹಾಗೂ ಹೊರಾಂಗಣದ ಜಾಹೀರಾತುಗಳಿಗಾಗಿ ಕೇಂದ್ರ ಸರಕಾರವು 1,700 ಕೋ.ರೂ. ಖರ್ಚು ಮಾಡಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಮಂಗಳವಾರ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್  2018-19ರಿಂದ 2020-21ರ ಅವಧಿಯಲ್ಲಿ ಸರಕಾರವು ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ನೀಡಿದ ಜಾಹೀರಾತುಗಳಿಗೆ 1,700 ಕೋ.ರೂ. ಖರ್ಚು ಮಾಡಿದೆ ಎಂದು ತಿಳಿಸಿದರು.

ಸರಕಾರದ ನೀತಿಗಳು ಹಾಗೂ ಯೋಜನೆಗಳ ಕುರಿತಾಗಿ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News