ಆಂಗ್ ಸಾನ್ ಸೂ ಕೀ ಅವರಿಗೆ ಜೈಲುಶಿಕ್ಷೆ ಆತಂಕವನ್ನುಂಟು ಮಾಡಿದೆ:ಭಾರತ

Update: 2021-12-07 18:10 GMT

ಹೊಸದಿಲ್ಲಿ,ಡಿ.7: ಸೇನೆಯ ವಿರುದ್ಧ ಭಿನ್ನಾಭಿಪ್ರಾಯಗಳನ್ನು ಪ್ರಚೋದಿಸಿದ್ದಕ್ಕಾಗಿ ಮತ್ತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮ್ಯಾನ್ಮಾರ್‌ನ ನಾಯಕಿ ಆಂಗ್ ಸಾನ್ ಸೂ ಕೀ ಅವರಿಗೆ ನಾಲ್ಕು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿರುವುದು ತನಗೆ ಆತಂಕವನ್ನುಂಟು ಮಾಡಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮಂಗಳವಾರ ಹೇಳಿದೆ.

 ಡಝನ್‌ಗಟ್ಟಲೆ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಸೂ ಕೀ ಫೆಬ್ರವರಿಯಲ್ಲಿ ಮಿಲಿಟರಿ ಬಂಡಾಯ ನಡೆದಾಗಿನಿಂದ ಗೃಹಬಂಧನದಲ್ಲಿದ್ದಾರೆ.
ಮ್ಯಾನ್ಮಾರ್‌ನಲ್ಲಿ ಪ್ರಜಾಸತ್ತಾತ್ಮಕ ಪರಿವರ್ತನೆಯನ್ನು ತಾನು ನಿರಂತರವಾಗಿ ಬೆಂಬಲಿಸುತ್ತಿದ್ದೇನೆ ಎಂದು ಭಾರತವು ಹೇಳಿದೆ. ಮ್ಯಾನ್ಮಾರ್‌ನಲ್ಲಿ ಕಾನೂನಿನ ಆಡಳಿತ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ಎತ್ತಿ ಹಿಡಿಯುವಂತೆ ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ಕರೆನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News