ಬಣಕಲ್: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

Update: 2021-12-08 04:43 GMT
ಸಾಂದರ್ಭಿಕ ಚಿತ್ರ (source: PTI)

ಕೊಟ್ಟಿಗೆಹಾರ, ಡಿ.8: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯವಾದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ‌‌ ನಡೆದಿದೆ.

ಈ ಸಂಬಂಧ ಆರೋಪಿ ಕೋಳೂರು ಗ್ರಾಮದ ನಾರಾಯಣ ಎಂಬಾತನನ್ನು ಬಂಧಿಸಿರುವ ಬಣಕಲ್ ಪೊಲೀಸರು ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧೀಸಿ  ತನಿಖೆ‌ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News