ಉಳ್ಳಾಲ: ರಸ್ತೆ ಬದಿ ಲೈಟ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಯುವಕ ಮೃತ್ಯು

Update: 2021-12-08 05:04 GMT

ಉಳ್ಳಾಲ, ಡಿ.8: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟ ರ್ಘಟನೆ ಬುಧವಾರ ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ.

ಮೃತ ಯವವಕನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22)ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News