ಗೃಹರಕ್ಷಕದಳ ಸಿಬ್ಬಂದಿಗೆ ನೀಡುವ ಸೌಲಭ್ಯಗಳು ಹೆಚ್ಚಾಗಬೇಕು: ತಹಶೀಲ್ದಾರ್ ಡಾ.ಕಾಂತರಾಜ್

Update: 2021-12-08 13:30 GMT

ಚಿಕ್ಕಮಗಳೂರು, ಡಿ.8: ಗೃಹರಕ್ಷಕ ದಳದ ಸಿಬ್ಬಂದಿ ಆತ್ಮವಿಶ್ವಾಸ, ಜ್ಞಾನ, ಕರ್ತವ್ಯನಿಷ್ಠೆಯ ನ್ನು ಹೆಚ್ಚಿಸಿಕೊಳ್ಳುವಂತೆ ತಹಶೀಲ್ದಾರ್ ಡಾ.ಕೆ.ಜೆ.ಕಾಂತರಾಜ್ ಕಿವಿಮಾತು ಹೇಳಿದರು.

ಬುಧವಾರ ನಗರದ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಗ್ರಹರಕ್ಷಕರ ದಿನಾಚಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್, ಅತೀವೃಷ್ಟಿ, ಚುನಾವಣೆ ಸಂದರ್ಭದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಪೊಲೀಸ್ ಇಲಾಖೆ, ಕಾರಾಗೃಹ ಸೇರಿದಂತೆ ಇತರೆ ಇಲಾಖೆಯಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇತರೆ ಇಲಾಖೆ ಸಿಬ್ಬಂದಿಗೆ ಸಿಗುವ ಸವಲತ್ತುಗಳು ಗೃಹರಕ್ಷಕ ದಳದ ಸಿಬ್ಬಂದಿಗೂ ಸಿಗುವಂತಾಗಬೇಕು ಎಂದು ಅಭಿಪ್ರಾಯಿಸಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕ ರಾಕೇಶ್ ಕಾಂಬಳೆ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂ ದಿಗಳು ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಿಮ್ಮ ಕರ್ತವ್ಯನಿಷ್ಠೆಯನ್ನು ಪರಿಗಣಿಸಿ ಈ ಹಿಂದೆ ನಗದು ಬಹುಮಾನವನ್ನು ನೀಡಲಾಗಿತ್ತು. ಕೋವಿಡ್ ಕಾರಣದಿಂದ ಈ ಬಾರೀ ನೀಡಲಾಗಿರಲಿಲ್ಲ, ಸದ್ಯದಲ್ಲೇ ನಗದು ಬಹುಮಾನ ಘೋಷಣೆ ಮಾಡಲಾಗು ವುದು ಎಂದು ತಿಳಿಸಿದರು.

ನಿಮ್ಮ ಶ್ರಮ ಶ್ಲಾಘನೀಯವಾದದ್ದು, ಪೊಲೀಸ್ ಇಲಾಖೆಗೆ ಸರಿಸಮನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳು ಸಿಗುತ್ತಿಲ್ಲ, ಹಾಗೇಂದು ಶಕ್ತಿಗುಂ ದದೆ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಉನ್ನತ ಹುದ್ದೆಗೇರುವಂತೆ ಮಾಡಲು ಮುಂದಾಗಬೇಕೆಂದು ತಿಳಿಸಿದರು.

ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಆರ್.ಅನಿಲ್‍ಕುಮಾರ್ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳಿಗೆ ಇತ್ತೀಚೆಗೆ ಸೆಕ್ಯೂರಿಟಿ ಗಾರ್ಡ್‍ಗಳನ್ನು ನೇಮಕ ಮಾಡಿಕೊಂಡಿ ಕೊಳ್ಳಲಾಗಿದೆ. ಆದರೆ ಅವರಿಗೆ ಹೆಚ್ಚಿನ ತರಬೇತಿ ಇರುವುದಿಲ್ಲ, ಆ ವ್ಯಕ್ತಿ ಯಾರು ಎಂ ಬ ಮಾಹಿತಿ ಕೂಡ ಇರುವುದಿಲ್ಲ ಅದರ ಬದಲು ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನೇಮಿಸಿಕೊಂಡಲ್ಲಿ ಇನ್ನೂ ಹೆಚ್ಚಿನ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ 600 ಜನ ಗೃಹರಕ್ಷಕ ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಪೂರ್ಣವಾಧಿಯ ಕೆಲಸ ಸಿಗುತ್ತಿಲ್ಲ, ಎರಡು ಮೂರು ತಿಂಗಳು ಕೆಲಸ ನಿರ್ವಹಿಸಬೇ ಕಾದ ಪರಿಸ್ಥಿತಿ ಇದೆ. ಪೂರ್ಣಾವಧಿ ಕೆಲಸ ಸಿಗದಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಗಳಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳ ನಿಯೋ ಜನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಗೃಹರಕ್ಷಕ ದಳದ ಸಿಬ್ಬಂದಿಗಳಲ್ಲಿ ಶ್ರದ್ಧೆ ಮತ್ತು ಆಸಕ್ತಿಯಿಂದ ತಮ್ಮ ಕರ್ತವ್ಯ ನಿರ್ವಹಿ ಸುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಗೃಹರಕ್ಷಕದಳದ ಸಿಬ್ಬಂದಿಗೆ ಉತ್ತಮ ಹೆಸರಿದೆ ಅದನ್ನು ಉಳಿಸಿ ಬೆಳೆಸುವ ಜೊತೆಗೆ ನಿಮ್ಮ ಕಿರಿಯರಿಗೆ ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಉಪ ಸಮಾದೇಷ್ಟಕ ಹಾಲಪ್ಪ ಸ್ವಾಗತಿಸಿದರು. ವೀರೂಪಾಕ್ಷಪ್ಪ ನಿರೂ ಪಿಸಿದರು, ಮಹೇಶ್ವರಪ್ಪ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News