ಬೆಂಗಳೂರು: 11 ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶ, ಓರ್ವನ ಬಂಧನ

Update: 2021-12-08 15:08 GMT

ಬೆಂಗಳೂರು, ಡಿ.8: ಬೆಂಗಳೂರು, ಮಂಗಳೂರು ಸೇರಿದಂತೆಯೂ ಹೊರರಾಜ್ಯಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳಿಗೆ ನಿರಂತರವಾಗಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 11 ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಳ್ಳುವಲ್ಲಿ ಈಶಾನ್ಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇರಳ ಮೂಲದ ಅನೂಪ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಹಲವು ವರ್ಷಗಳಿಂದ ನಗರದ ಹೊರವಲಯ ಬಿದರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಆರೋಪಿ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ವ್ಯವಸ್ಥಿತ ಮಾರ್ಗವಾಗಿ ಖಾಸಗಿ ವಾಹನಗಳಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. 

ಸಾರ್ವಜನಿಕರಿಗೆ ಮಾದಕವಸ್ತು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಹೆಬ್ಬಾಳ ಬಳಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಉಡುಪಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News