×
Ad

ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Update: 2021-12-08 22:11 IST

ಮಂಗಳೂರು, ಡಿ.8: ದ.ಕ.ಜಿಲ್ಲೆಯ ವಿಟ್ಲ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್‌ನ ಚುನಾವಣೆಗೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಸೂಚನೆ ಹೊರಡಿಸಿದ್ದಾರೆ.

ಡಿ.15ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.16 ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ.27ರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಮರು ಮತದಾನ ಅವಶ್ಯವಿದ್ದರೆ ಡಿ.29ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಡಿ.30ರ ಬೆಳಗ್ಗೆ 8 ಗಂಟೆಯಿಂದ ತಾಲೂಕಿನ ಕೇಂದ್ರ ಸ್ಥಾನದಲ್ಲಿ ಮತಗಳ ಎಣಿಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯು ಡಿ.30ಕ್ಕೆ ಮುಕ್ತಾಯ ಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News