×
Ad

ಸುಟ್ಟ ಗಾಯದಿಂದ ಬಳಲುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಚಿಂತನೆ

Update: 2021-12-09 10:43 IST
Photo: Indian express

ಹೊಸದಿಲ್ಲಿ: ತಮಿಳುನಾಡಿನಲ್ಲಿ ಬುಧವಾರ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದಿರುವ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶೇ.45 ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರನ್ನು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು India Today ವರದಿ ಮಾಡಿದೆ.

ಹೆಲಿಕಾಪ್ಟರ್ ನ ಬ್ಲಾಕ್ ಬಾಕ್ಸ್ ವಶಕ್ಕೆ

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಹಿತ 13 ಮಂದಿಯನ್ನು ಬಲಿ ಪಡೆದಿರುವ  ಭಾರತೀಯ ವಾಯುಪಡೆಯ(ಐಎಎಫ್) ಹೆಲಿಕಾಪ್ಟರ್‌ನ ಬ್ಲಾಕ್ ಬಾಕ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಕುನ್ನೂರಿನಲ್ಲಿ ಬುಧವಾರ ಪತನಗೊಂಡಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿದ್ದ ಐಎಎಫ್ ಸಿಬ್ಬಂದಿ ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು India Today ವರದಿ ಮಾಡಿದೆ.

ಈಗ ವಶಪಡಿಸಿಕೊಂಡಿರುವ ಬ್ಲ್ಯಾಕ್ ಬಾಕ್ಸ್  ಹೆಲಿಕಾಪ್ಟರ್ ಪತನವಾಗಲು ಕಾರಣವಾದುದನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News