ಚಾಮರಾಜನಗರ: ಪತ್ನಿಯನ್ನು ಹತ್ಯೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

Update: 2021-12-09 07:03 GMT

ಚಾಮರಾಜನಗರ: 13 ವರ್ಷ ವಯಸ್ಸಿನ ಬಾಲಕನ ಸಾಕ್ಷ್ಯವನ್ನು ಪರಿಗಣಿಸಿದ  ನ್ಯಾಯಾಲಯ ಅಪರಾಧಿಯಾಗಿರುವ ಆತನ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 

ಕುಡಿದ ಮತ್ತಿನಲ್ಲಿ ಪತ್ನಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಘಟನೆ ವಿವರ: 18 ವರ್ಷಗಳ ಹಿಂದೆ ಉತ್ತುವಳ್ಳಿ ಗ್ರಾಮದ ಚಿನ್ನತಾಯಮ್ಮ ಎಂಬಾಕೆಯನ್ನು ಮಂಜು ವಿವಾಹವಾಗಿದ್ದ. ಆದರೆ, 5-6 ವರ್ಷಗಳಿಂದ ಈಚೆಗೆ ಮದ್ಯಪಾನ ಮಾಡಿ ನಿತ್ಯ ಪತ್ನಿಯೊಂದಿಗೆ ಜಗಳ ಮಾಡುವುದನ್ನು ರೂಢಿಸಿಕೊಂಡಿದ್ದ ಎಂದು ಹೇಳಲಾಗಿದ್ದು, ಅದೇ ರೀತಿ, 2017 ರ ಅಕ್ಟೋಬರ್ 26 ಮಧ್ಯರಾತ್ರಿ ದಂಪತಿ ಜಗಳ ತಾರಕಕ್ಕೇರಿತ್ತು. ಆ ವೇಳೆ, ಮಂಜು ಪತ್ನಿ ಚಿನ್ನತಾಯಮ್ಮಳಿಗೆ ಮರದ ಪಟ್ಟಿಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ.ಅಂದು ರಾತ್ರಿ ಅಪ್ಪ - ಅಮ್ಮನ ನಡುವೆ ನಡೆದ ಗಲಾಟೆಯನ್ನು ಕಂಡಿದ್ದ ಮಗ ಕೊಲೆ ಮಾಡಿದ್ದು ಹೇಗೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿ, ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡಿದ್ದಾನೆ. 

ಘಟನೆ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ವಕೀಲೆ ಉಷಾ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News