ದಿಲ್ಲಿಯ ನ್ಯಾಯಾಲಯದಲ್ಲಿ ಸ್ಫೋಟ, ಪೊಲೀಸ್ ಸಿಬ್ಬಂದಿಗೆ ಗಾಯ

Update: 2021-12-09 07:41 GMT

ಹೊಸದಿಲ್ಲಿ: ದಿಲ್ಲಿಯ ರೋಹಿಣಿ ನ್ಯಾಯಾಲಯದಲ್ಲಿ ಗುರುವಾರ ಬೆಳಗ್ಗೆ ನಡೆದ ಸ್ಫೋಟದಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಏತನ್ಮಧ್ಯೆ, ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ  ಹಾಗೂ  ಎಲ್ಲಾ ಗೇಟ್‌ಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ನ್ಯಾಯಾಲಯದಲ್ಲಿ ಲ್ಯಾಪ್‌ಟಾಪ್ ಸ್ಫೋಟಗೊಂಡಿದೆ. ಆದರೆ, ಮೇಲ್ನೋಟಕ್ಕೆ ಇದೊಂದು ಸಣ್ಣ ಕಚ್ಚಾ ಬಾಂಬ್ ಸ್ಫೋಟದಂತೆ ತೋರುತ್ತಿದೆ ಎಂದು ದಿಲ್ಲಿ  ಪೊಲೀಸ್ ಮೂಲಗಳು ತಿಳಿಸಿವೆ. ಫೋರೆನ್ಸಿಕ್ಸ್ ತಂಡವು ಪ್ರಕರಣವನ್ನು ತನಿಖೆ ಮಾಡುತ್ತದೆ ಹಾಗೂ  ಅದನ್ನು ಖಚಿತಪಡಿಸುತ್ತದೆ.

ಸದ್ಯ ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ತನ್ನ ಪ್ರಾಥಮಿಕ ತನಿಖೆಯನ್ನು ಮುಗಿಸಿದ ನಂತರ, ರೋಹಿಣಿ ಕೋರ್ಟ್ ಬಾರ್ ಅಸೋಸಿಯೇಷನ್ ಘಟನೆಯ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡುತ್ತದೆ.

ಬೆಳಗ್ಗೆ 10.40ಕ್ಕೆ ಸ್ಫೋಟದ ಬಗ್ಗೆ ಮಾಹಿತಿ ಲಭಿಸಿದ್ದು, ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಪೊಲೀಸ್ ಆಯುಕ್ತರು  ಕಾನೂನು ಮತ್ತು ಸುವ್ಯವಸ್ಥೆ ಘಟನಾ ಸ್ಥಳಕ್ಕೆ ತಲುಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News