ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆ: ಭದ್ರಾವತಿಯ ನರ್ಸಿಂಗ್ ಕಾಲೇಜು ಸೀಲ್ ಡೌನ್

Update: 2021-12-09 12:41 GMT

ಭದ್ರಾವತಿ,ಡಿ.09:  ಭದ್ರಾವತಿಯ ನಿರ್ಮಲಾ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೋವಿಡ್ -19 ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ನರ್ಸಿಂಗ್ ಹಾಸ್ಟೆಲನ್ನು ಸೀಲ್‌ ಡೌನ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.

ಶಿವಮೊಗ್ಗಕ್ಕೆ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನರ್ಸಿಂಗ್ ಹಾಸ್ಟೆಲನ್ನು ಸದ್ಯ ಸೀಲ್‌ ಡೌನ್ ಮಾಡಲಾಗಿದೆ.

ಅಲ್ಲದೆ ಸ್ಯಾನಿಟೈಸ್ ಮಾಡುವ ಉದ್ದೇಶವಿರುವ ನಿರ್ಮಲಾ ಆಸ್ಪತ್ರೆಯನ್ನು ಒಂದು ದಿನದ ಮಟ್ಟಿಗೆ ಮುಚ್ಚಲಾಗಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಸೂಚನೆಯಂತೆ ಇಲ್ಲಿನ ಸಿಬ್ಬಂದಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲಾಗಿದೆ.

ಆಸ್ಪತ್ರೆ ಮುಂಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News