ವಿಧಾನ ಪರಿಷತ್ ಚುನಾವಣೆ: ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಹೈಕೋರ್ಟ್ ಅನುಮತಿ

Update: 2021-12-09 13:09 GMT

ಬೆಂಗಳೂರು, ಡಿ.9: ರಾಜಧಾನಿ ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ 15 ಸದಸ್ಯರ ಮತದಾನಕ್ಕೆ ಹೈಕೋರ್ಟ್ ಅವಕಾಶ ಕಲ್ಪಿಸಿ ಆದೇಶಿಸಿದೆ.    

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯೂಸುಫ್ ಶರೀಫ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. 

ನಾಮನಿರ್ದೇಶಿತ ಸದಸ್ಯರು ಹಾಕುವ ಮತಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ ಇಡಬೇಕು. ಕೋರ್ಟ್ ಅನುಮತಿಯಿಲ್ಲದೇ ಫಲಿತಾಂಶ ಪ್ರಕಟಿಸಬಾರದು. ಈ 15 ಜನ ಪರಿಷತ್ ಸದಸ್ಯರ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದು ನ್ಯಾಯಪೀಠವು ಆದೇಶಿಸಿದೆ. 

ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ರಿಟ್ ಅರ್ಜಿ ಸಲ್ಲಿಸಿ, ಆನೇಕಲ್, ಅತ್ತಿಬೆಲೆ ಮತ್ತು ಮಹದೇವಪುರ ಪುರಸಭೆಯ 15 ನಾಮನಿರ್ದೇಶಿತ ಸದಸ್ಯರ ಮತದಾನ ಪ್ರಶ್ನಿಸಿದ್ದರು. ಡಿ.10ರಂದು ಕರ್ನಾಟಕ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News