×
Ad

ಮಂಗಳೂರು ವಿವಿ ಮಟ್ಟದ ಕಬಡ್ಡಿ ಟೂರ್ನಿ ಉದ್ಘಾಟನೆ

Update: 2021-12-09 20:01 IST

ಉಡುಪಿ, ಡಿ.9: ಕಲಿಯುಕೆಯೊಂದಿಗೆ ದೈಹಿಕ ಕ್ಷಮತೆಯು ವಿದ್ಯಾರ್ಥಿಗಳಿಗೆ ಅತಿ ಮುಖ್ಯ. ಈ ದೃಷ್ಟಿಯಿಂದಲೇ ಹೊಸ ಶಿಕ್ಷಣ ನೀತಿಯು ಕ್ರೀಡೆಯನ್ನು ಅಧ್ಯಯನದ ಒಂದು ಭಾಗವಾಗಿ ಪರಿಗಣಿಸಿದೆ ಎಂದು ಉಡುಪಿ ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನಿನ ಅಧ್ಯಕ್ಷ ಯಶಪಾಲ್ ಸುವರ್ಣ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯದ ಪದವಿ ಕಾಲೇಜುಗಳ ಕಬಡ್ಡಿ ಟೂರ್ನಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಭಾಗವಹಿಸಿದ್ದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಪ್ರೊ. ಒಲಿವರ್ ಜೇಮ್ಸ್, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ. ಹರಿದಾಸ ಕೂಳೂರು, ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ ದರು. ದಯಾನಂದ ಕರ್ಕೇರಾ ಕಾರ್ಯಕ್ರಮ ನಿರೂಪಿಸಿದರೆ, ಉಮೇಶ್ ಪೈ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News