×
Ad

ರೆಡ್‌ಕ್ರಾಸ್‌ನಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

Update: 2021-12-09 20:58 IST

ಉಡುಪಿ, ಡಿ.9: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ವತಿ ಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿಸೆಂಬರ್ 10ರಂದು ಅಪರಾಹ್ನ 2 ಗಂಟೆಗೆ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಆಚರಿಸಲಾಗುವುದು.

ಮಾನವ ಹಕ್ಕುಗಳ ಪ್ರೊಟೆಕ್ಷನ್ ಫೌಂಡೇಶನ್‌ನ ಜಿಲ್ಲಾ ಅಧ್ಯಕ್ಷ ಡಾ. ರವೀಂದ್ರ ನಾಥ ಶ್ಯಾನುಭಾಗ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News