ದ.ಕ.ಜಿಲ್ಲೆಯಲ್ಲಿ 11 ಮಂದಿಗೆ ಕೋವಿಡ್ ಪಾಸಿಟಿವ್
Update: 2021-12-09 21:24 IST
ಮಂಗಳೂರು, ಡಿ.9: ದ.ಕ.ಜಿಲ್ಲೆಯಲ್ಲಿ ಗುರುವಾರ 11 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 21 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.15 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 23,06,912 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,90,911 ನೆಗೆಟವ್ ಮತ್ತು 1,16,001 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,176 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,698 ಮಂದಿ ಈವರೆಗೆ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 127 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 90,088 ಪ್ರಕರಣ ದಾಖಲಿಸಿ, 1,09,02,770 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.