×
Ad

ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಬಿಪಿನ್ ರಾವತ್, ಇತರರಿಗೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ

Update: 2021-12-09 23:15 IST

ಹೊಸದಿಲ್ಲಿ: ತಮಿಳುನಾಡಿನಲ್ಲಿ ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 11 ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ  ಅಂತಿಮ ನಮನ ಸಲ್ಲಿಸಿದರು.

13 ಮೃತದೇಹಗಳನ್ನು ಸಿ130-ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ತಮಿಳುನಾಡಿನಿಂದ ದಿಲ್ಲಿಗೆ ತರಲಾಯಿತು.

ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ  ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರು ದಿಲ್ಲಿಯ ಪಾಲಂ ಏರ್ ಫೋರ್ಸ್ ಬೇಸ್ ನಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಅಪಘಾತದಲ್ಲಿ ಮಡಿದವರಿಗೆ ಅಂತಿಮ ನಮನ ಸಲ್ಲಿಸಿದರು. ಜೊತೆಗೆ ವಾಯುಸೇನೆ, ನೌಕಾಪಡೆ ಹಾಗೂ  ಭೂಸೇನೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

ಇಲ್ಲಿಯವರೆಗೆ ಕೇವಲ ನಾಲ್ಕು ಶವಗಳನ್ನು ಮಾತ್ರ ಗುರುತಿಸಲಾಗಿದೆ. ಜನರಲ್ ರಾವತ್ ಹಾಗೂ  ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್,ಎಸ್, ಲಿಡ್ಡರ್ ಹಾಗೂ  ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಗುರುತು ಪತ್ತೆ ಹಚ್ಚಲಾಗಿದೆ. ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಕುಟುಂಬಸ್ಥರಿಗೆ ನೀಡಲಾಗುವುದು. ಉಳಿದವರನ್ನು ಗುರುತಿಸುವವರೆಗೆ ಆರ್ಮಿ ಬೇಸ್  ಆಸ್ಪತ್ರೆಯಲ್ಲಿ ಇರಿಸಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News