ಬೆಂಗಳೂರು: ಮಹಿಳಾ ಟೆಕ್ಕಿ ಆತ್ಮಹತ್ಯೆ

Update: 2021-12-10 14:04 GMT

ಬೆಂಗಳೂರು, ಡಿ.10: ಮಹಿಳಾ ಟೆಕ್ಕಿಯೊಬ್ಬಾಕೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಸಂಗೀತಾ ಮತ್ತು ಈಕೆಯ ಪತಿ ಖಾಸಗಿ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಶುಕ್ರವಾರ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ.

ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News