ದೇಶದಲ್ಲಿ ಇದುವರೆಗೆ 25 ಒಮೈಕ್ರಾನ್ ಪ್ರಕರಣಗಳು ಪತ್ತೆ: ಕೇಂದ್ರ‌

Update: 2021-12-10 20:26 GMT

ಹೊಸದಿಲ್ಲಿ: ದೇಶದಲ್ಲಿ ಇದುವರೆಗೆ ಒಟ್ಟು 25 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಎಲ್ಲ ಪ್ರಕರಣಗಳಲ್ಲಿ ಲಘು ರೋಗ ಲಕ್ಷಣ ಕಂಡು ಬಂದಿದೆ ಎಂದು ಕೇಂದ್ರ ಸರಕಾರ ಶುಕ್ರವಾರ ಹೇಳಿದೆ. ಒಮೈಕ್ರಾನ್ ಇನ್ನೂ ಆರೋಗ್ಯ ವ್ಯವಸ್ಥೆಗೆ ಹೊರೆ ಉಂಟು ಮಾಡಿಲ್ಲ. ಆದರೆ, ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಸಾಂಕ್ರಾಮಿಕ ರೋಗದ ಕುರಿತ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರಕಾರ, ಭಾರತದಲ್ಲಿ ಒಮೈಕ್ರಾನ್ ಒಟ್ಟು 26 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 10, ರಾಜಸ್ಥಾನದಲ್ಲಿ 9, ಗುಜರಾತ್ನಲ್ಲಿ 3 ಕರ್ನಾಟಕದಲ್ಲಿ 2 ಹಾಗೂ ದಿಲ್ಲಿಯಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ ಎಂದಿದೆ.

ಇದುವರೆಗೆ ಪತ್ತೆಯಾದ ಒಮೈಕ್ರಾನ್ ರೂಪಾಂತರಿ ಪ್ರಕರಣದಲ್ಲಿ ಮುಖ್ಯವಾಗಿ ಲಘು ರೋಗ ಲಕ್ಷಣಗಳು ಕಂಡು ಬಂದಿವೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದ್ದಾರೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News