×
Ad

ಗಣೀಶ ನಾಯಕ್ ಇಂದಾಜೆ

Update: 2021-12-11 19:37 IST

ಮಂಗಳೂರು: ಪುತ್ತೂರಿನ ಬ್ರೈಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾಗಿದ್ದ ಕನ್ನಡ್ಕ ಗಣೀಶ ನಾಯಕ್ ಇಂದಾಜೆ (59)ನಗರದ ಖಾಸಗಿ ಆಸ್ಪತ್ರೆಯ ಲ್ಲಿಂದು ನಿಧನರಾಗಿದ್ದಾರೆ.

ದೆಹಲಿಯ ನ್ಯಾಶನಲ್ ಯೂತ್ ಪ್ರೊಜೆಕ್ಟ್ ನ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಇವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ, ಪುತ್ತೂರು ಗ್ರಾಹಕರ ವೇದಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸಹಿತ 8 ಸಹೋದರರು, 5 ಮಂದಿ ಸಹೋದರಿಯರು ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ.ಖಾದರ್, ಕರಾವಳಿ ಕಾಲೇಜು ಮತ್ತು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News