ಉಡುಪಿ: ರಾಷ್ಟ್ರೀಯ ಕಲೆ, ಕರಕುಶಲ ವಸ್ತುಗಳ ಪ್ರದರ್ಶನ ಮೇಳ ಉದ್ಘಾಟನೆ
Update: 2021-12-11 20:29 IST
ಉಡುಪಿ, ಡಿ.11: ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ರಾಷ್ಟ್ರೀಯ ಕಲೆ ಹಾಗೂ ಕರಕುಶಲ ವಸ್ತುಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅದಮಾರು ಪರ್ಯಾಯ ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಶನಿವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಉದ್ಘಾಟಿಸಿದರು.
ಕಟಪಾಡಿ ಆನೆಗುಂದಿ ಮಠದ ಶ್ರೀಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಡಾ.ನಾ.ಸೋಮೇ ಶ್ವರ್, ಪತ್ರಕರ್ತ ರಂಗನಾಥ್ ಭಾರದ್ವಾಜ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್, ಕಲಾವಿದ ಪುರುಷೋತ್ತಮ್ ಅಡ್ವೆ ಮೊದಲಾದವರು ಉಪಸ್ಥಿತರಿದ್ದರು. ಈ ಮೇಳದಲ್ಲಿ ವಿವಿಧ ರಾಜ್ಯಗಳ ಕರಕುಶಲ ಕರ್ಮಿಗಳು ಭಾಗವಹಿಸಿದ್ದರು.