×
Ad

ಉಡುಪಿ: ಡಿ.13ರಂದು ಭವ್ಯ ಕಾಶೀ ದಿವ್ಯ ಕಾಶೀ ಅಭಿಯಾನ

Update: 2021-12-11 21:12 IST

ಉಡುಪಿ: ಕಾಶಿ ವಿಶ್ವನಾಥ ಧಾಮದ ನವೀಕೃತ ಧಾರ್ಮಿಕ ನಗರವನ್ನು ಡಿ.13ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಮಂಡಲ ಮತ್ತು ಮಹಾ ಶಕ್ತಿಕೇಂದ್ರಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಅಭಿಯಾನದ ಜಿಲ್ಲಾ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಉಡುಪಿ ನಗರ, ಉಡುಪಿ ಗ್ರಾಮಾಂತರ, ಕಾಪು, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಮಂಡಲಗಳ ಮತ್ತು ಮಹಾ ಶಕ್ತಿ ಕೇಂದ್ರಗಳ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರ ವರೆಗೆ ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ನಡೆಯಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News