ಕಾಪು: ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಮೃತ್ಯು
Update: 2021-12-11 21:26 IST
ಕಾಪು, ಡಿ.11: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ರೊಬ್ಬರು ಮೃತಪಟ್ಟ ಘಟನೆ ಕಟಪಾಡಿ ಸಮೀಪದ ಬಿಸ್ಮಿಲ್ಲಾ ಹೋಟೆಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.10ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮೂಡಬೆಟ್ಟು ಪೊಸಾರು ನಿವಾಸಿ ರಾಜೇಂದ್ರ ಕಾಮತ್(56) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಎದುರಿನಲ್ಲಿದ್ದ ಸೈಕಲ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಕಾಮತ್, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.