×
Ad

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಯ ಬಂಧನ

Update: 2021-12-11 22:08 IST
ಗೌತಮ್ 

ಮಂಗಳೂರು, ಡಿ.11: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಮಂಜೇಶ್ವರ ಸಮೀಪದ ಕುಂಜತ್ತೂರಿನ ಆರೋಪಿ ಗೌತಮ್ ಎಂಬಾತನನ್ನು ನಗರದ ಮಹಿಳಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಆರೋಪಿಯು ಕಳೆದ ಎರಡು ವರ್ಷದಿಂದ ಕಾಲೇಜು‌ ವಿದ್ಯಾರ್ಥಿನಿಯಾಗಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು. ಬಳಿಕ ಪ್ರಕರಣವನ್ನು ‌ನಗರದ ಮಹಿಳಾ ಠಾಣೆಗೆ ವರ್ಗಾಯಿಸಲಾಗಿತ್ತು. 

17ರ ಹರೆಯದ ಬಾಲಕಿಯನ್ನು ಮದುವೆ ಮಾಡಿಕೊಡಬೇಕು ಎಂದು ಬಾಲಕಿಯ ಮನೆಯವರನ್ನು‌ ಆರೋಪಿಯು ಒತ್ತಾಯ ಮಾಡುತ್ತಿದ್ದ. ಅಲ್ಲದೆ ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದರಿಂದ ನೊಂದ ಯುವತಿಯ ತಾಯಿ ದೂರು ನೀಡಿದ್ದರು. ಅದರಂತೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಗೌತಮ್‌‌ನನ್ನು ಬಂಧಿಸಿ ನ್ಯಾಯಾಲಕ್ಕೆ‌ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News