×
Ad

ಹಿರಿಯೂರು: ಸರಣಿ ಅಪಘಾತಕ್ಕೆ ನಾಲ್ವರು ಯುವಕರು ಬಲಿ, ಹಲವರಿಗೆ ಗಾಯ

Update: 2021-12-13 09:03 IST

ಚಿತ್ರದುರ್ಗ, ಡಿ.13: ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.

ಮೃತರನ್ನು ಗದಗ ಜಿಲ್ಲೆಯ ಹುಯಿಗೊಳ ನಿವಾಸಿಗಳಾದ ಹನುಮಪ್ಪ ಕಳಕಪ್ಪ ಹುನಗುಂದಿ(30), ಗುರಪ್ಪ ಹುಗರ್(26), ರಮೇಶ್(28) ಹಾಗೂ ಪ್ರಶಾಂತ್(36) ಎಂದು ಗುರುತಿಸಲಾಗಿದೆ.

ಆರಂಭದಲ್ಲಿ ಈರುಳ್ಳಿ ಸಾಗಾಟದ ಲಾರಿ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದೆ. ಈ ವೇಳೆ ನಿಯಂತ್ರಣ ತಪ್ಪಿದ ಲಾರಿ ಚಲಿಸುತ್ತಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದಿದೆ. ಅಲ್ಲದೆ ಅಪಘಾತದ ತೀವ್ರತೆಗೆ ಎರಡೂ ಲಾರಿಗಳು ಉರುಳಿ ಬಿದ್ದಿವೆ ಎಂದು ತಿಳಿದುಬಂದಿದೆ. ಈರುಳ್ಳಿ ಸಾಗಾಟದ ಲಾರಿಯ ಟಯರ್ ಸ್ಫೋಟಗೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಘಟನಾ ಸ್ಥಳಕ್ಕೆ ಹಿರಿಯೂರು ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News