×
Ad

ಬೆಳ್ತಂಗಡಿ: ಮಲಾಡಿ ಗ್ರಾಪಂ ಪಿಡಿಒ ಎಸಿಬಿ ಬಲೆಗೆ

Update: 2021-12-13 14:48 IST

ಬೆಳ್ತಂಗಡಿ, ಡಿ.13: ತಾಲೂಕಿನ ಮಲಾಡಿ ಗ್ರಾಪಂ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಮಲಾಡಿ ಗ್ರಾಮ ಪಂಚಾಯತ್ ಕಚೇರಿಯೊಳಗೆ ಪಿಡಿಓ ರವಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಅವರನ್ನು ಸೆರೆ ಹಿಡಿದಿದ್ದಾರೆ.

9/11 ಮಾಡಲು 15,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದ‌.ಕ‌.ಭ್ರಷ್ಟಾಚಾರ ನಿಗ್ರಹ ದಳ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಪಿಡಿಒ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News