×
Ad

ಹಾಸ್ಟೆಲ್ ಬಳಿ ಗಾಂಜಾ ಮಾರಾಟ: ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ

Update: 2021-12-13 18:56 IST

ಹುಬ್ಬಳ್ಳಿ, ಡಿ.13: ಹುಬ್ಬಳ್ಳಿ ನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದು,  2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 1.1 ಕೆಜಿ ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಈ ಪ್ರಕರಣ ವಿಚಾರಣೆ ನಡೆಸಿದ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಮಂಜುನಾಥ ಭಟ್ ಅಡಿಗ ಆದೇಶ ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಬಿ.ವಿ. ಪಾಟೀಲ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News