ಡಿ.14ರಂದು ಮಂಗಳೂರು ವಲಯ ಕಬಡ್ಡಿ ಪಂದ್ಯಾವಳಿ
Update: 2021-12-13 19:12 IST
ಉಡುಪಿ, ಡಿ.13: ಉಡುಪಿಯ ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಮಂಗಳೂರು ವಲಯ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯು ಡಿ.14ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಲಯದ ಆವರಣದಲ್ಲಿ ಜರಗಲಿದೆ.
ಉದ್ಘಾಟನಾ ಸಮಾರಂಭದಲ್ಲಿ ಕಾಪು ಪೋಲಿಸ್ ವೃತ್ತ ನಿರೀಕ್ಷಕ ಪ್ರಕಾಶ್, ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರು ಮಲೇಶ್ವರ ಭಟ್ ವಹಿಸಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.