ಟಿಕೇಟ್ ರಹಿತ ಪ್ರಯಾಣ: ನವೆಂಬರ್ ನಲ್ಲಿ 5 ಲಕ್ಷಕ್ಕೂ ಅಧಿಕ ದಂಡ ವಸೂಲಿ; ಕೆಎಸ್ಸಾರ್ಟಿಸಿ

Update: 2021-12-13 14:36 GMT

ಬೆಂಗಳೂರು, ಡಿ.13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನವೆಂಬರ್-2021ರ ಮಾಹೆಯಲ್ಲಿ 3495 ಟಿಕೇಟ್ ರಹಿತ ಪ್ರಯಾಣಿಕರಿಂದ 5,36,420ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ ಎಂದು ನಿಗಮವು ಪ್ರಕಟನೆ ಹೊರಡಿಸಿದೆ.

ನಿಗಮದ ತನಿಖಾ ತಂಡಗಳು ತಪಾಸಣೆ ಮಾಡಿ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,577 ವಾಹನಗಳನ್ನು ತನಿಖೆಗೊಳಪಡಿಸಿ 3095 ಪ್ರಕರಣಗಳಲ್ಲಿ ದಂಡ ಸಂಗ್ರಹ ಮಾಡಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 62,080ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಇಲಾಖೆಯು ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ದಂಡದಿಂದ ತಪ್ಪಿಸಿಕೊಳ್ಳಲು ಸರಿಯಾದ ಟಿಕೇಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡಬೇಕು ನಿಗಮವು ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News