ಉಡುಪಿ: ಗ್ರಾ.ಪಂ.ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ
Update: 2021-12-13 21:09 IST
ಉಡುಪಿ, ಡಿ.13: ಗ್ರಾಮ ಪಂಚಾಯತ್ ಉಪ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ, ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 3 ಗ್ರಾಪಂನ ಸದಸ್ಯ ಸ್ಥಾನ, ಉಡುಪಿ, ಕಾಪು ಹಾಗೂ ಬೈಂದೂರು ತಾಲೂಕಿನ ತಲಾ 1 ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಸೇರಿದಂತೆ ಒಟ್ಟು 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಡಿ.17ಕೊನೆಯ ದಿನವಾಗಿದ್ದು, ಡಿ.18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದು ಕೊಳ್ಳಲು ಡಿ.20 ಕೊನೆಯ ದಿನವಾಗಿದ್ದು, ಡಿ.27ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿ.30ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.