×
Ad

ಮತಾಂತರ ನಿಷೇಧ ಕಾಯ್ದೆ; ರಾಜಕೀಯ ದುರುದ್ದೇಶವಿದೆ: ಸಿದ್ದರಾಮಯ್ಯ

Update: 2021-12-13 21:23 IST

ಬೆಳಗಾವಿ, ಡಿ.13: ಮತಾಂತರ ನಿಷೇಧ ಕಾಯ್ದೆ ರಾಜಕೀಯ ದುರುದ್ದೇಶದಿಂದ ಕೂಡಿರುವ ಕಾರಣದಿಂದಲೇ ನಾವು ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಧರ್ಮ, ಜಾತಿಯವರನ್ನು ಗುರಿಯಾಗಿರಿಸಿಕೊಂಡು ಅವರಿಗೆ ತೊಂದರೆ ಕೊಡುವ ಉದ್ದೇಶ ಇದರ ಹಿಂದಿದೆ. ಅಲ್ಲದೆ, ನಾವು ವಿಧೇಯಕದ ಪ್ರಸ್ತಾವನೆಯನ್ನೆ ವಿರೋಧ ಮಾಡುತ್ತೇವೆ ಎಂದರು. 

ಕಾಂಗ್ರೆಸ್ ಪಕ್ಷ ಯಾವುದೇ ಜಾತಿ ಧರ್ಮದ ಆಧಾರದಲ್ಲಿ ಜನರನ್ನು ನೋಡಲ್ಲ. ಎಲ್ಲ ಜಾತಿ, ಧರ್ಮದವರನ್ನು ಮನುಷ್ಯತ್ವದಲ್ಲಿ ನೋಡುತ್ತೇವೆ ಎಂದ ಅವರು, ಯಾವುದೇ ಧರ್ಮ ಪಾಲನೆ ಮಾಡುವ ಅವಕಾಶದ ಬಗ್ಗೆ ನಮ್ಮ ಸಂವಿಧಾನ ಸ್ಪಷ್ಟವಾಗಿ ತಿಳಿಸಿದೆ. ಆದರೆ, ಬಲವಂತದ ಮತಾಂತರಕ್ಕೆ ಮಾತ್ರ ಅವಕಾಶವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News