ಕಲಬುರಗಿ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ
Update: 2021-12-13 23:30 IST
ಕಲಬುರಗಿ: ಇಲ್ಲಿನ ರಿಂಗ್ ರೋಡ್ ಪ್ರದೇಶದ ವಿಂಟೇಜ್ ಫಂಕ್ಷನ್ ಹಾಲ್ ಹತ್ತಿರ ಓಮಿನಿ ಕಾರೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿರುವ ಘಟನೆ ಇಂದು ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ.
ಚಲಿಸುತ್ತಿದ್ದ ಕಾರಿನ ಒಳ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊ೦ಡಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಬಾಗಿಲು ಲಾಕ್ ಆಗಿ ಚಾಲಕ ಹೊರ ಬರಲು ಪರದಾಡಿದ್ದಾನೆ. ಈ ವೇಳೆ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಕಾರಿನ ಗ್ಲಾಸ್ ಒಡೆದು ಚಾಲಕನನ್ನ ರಕ್ಷಣೆ ಮಾಡಿದ್ದಾರೆ.
ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದು ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಬಳಿಕ ಸ್ಥಳಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.