ಡಿ.15ಕ್ಕೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ
Update: 2021-12-13 23:57 IST
ಬೆಳಗಾವಿ ಸುವರ್ಣವಿಧಾನಸೌಧ, ಡಿ. 13: ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಡಿ.15ರ ಬೆಳಗ್ಗೆ 8:30ಕ್ಕೆ ಇಲ್ಲಿನ ಸುವರ್ಣ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಚಿಡ್ರೆ, ರಾಮಲಿಂಗಾರೆಡ್ಡಿ, ಆರ್.ಧ್ರುವ ನಾರಾಯಣ, ಸಲೀಂ ಅಹ್ಮದ್ ಭಾಗವಹಿಸಲಿದ್ದಾರೆ.