×
Ad

ಮಡಿಕೇರಿ: ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಿಜೆಪಿ ನಾಯಕನ ಪುತ್ರನಿಗೆ ಸೋಲು

Update: 2021-12-14 12:03 IST
ಡಾ.ಮಂಥರ್                                              ಎ.ಮಂಜು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದರೆ, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ನಾಯಕ ಎ.ಮಂಜು ಅವರ ಪುತ್ರ ಡಾ. ಮಂಥರ್ ಗೌಡ ಪರಾಭವಗೊಂಡಿದ್ದಾರೆ. 

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಎ.ಮಂಜು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರೂ ಅವರ ಪುತ್ರ ಡಾ. ಮಂಥರ್ ಗೌಡ ಕಾಂಗ್ರೆಸ್ ನಿಂದ ಟಿಕೆಟ್ ಪಡೆದು ಕೊಡಗು ವಿಧಾನ ಪರಿಷತ್ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದರು. 

ಪುತ್ರ ಕಾಂಗ್ರೆಸ್ ನಿಂದ ಸ್ಪರ್ಧಗಿಳಿದ ಬಳಿಕ ಎ.ಮಂಜು ಅವರನ್ನು ಬಿಜೆಪಿ ಪಕ್ಷದ ಮಂಡ್ಯ ಜಿಲ್ಲೆಯ ಪ್ರಭಾರಿ, ಮತ್ತುಳಿದ ಜವಾಬ್ದಾರಿಯಿಂದ ಬಿಡುಗಡೆಗೊಳಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಎ.ಮಂಜು ಪಕ್ಷದ ಬಹಿರಂಗ ಸಭೆಯೊಂದರಲ್ಲಿ ಈ ಕುರಿತು ಬೇಸರ ವ್ಯಕ್ತಪಡಿಸಿದ್ದರು. 

ಇಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 705 ಮತಗಳನ್ನು ಪಡೆದಿದ್ದರೆ,  ಎ.ಮಂಜು ಅವರ ಪುತ್ರ ಡಾ. ಮಂಥರ್ ಗೌಡ 603 ಮತಗಳನ್ನು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News