×
Ad

ವಿವಾಹ ಸಮಾರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ನವ ದಂಪತಿ, ವೀಡಿಯೊ ವೈರಲ್

Update: 2021-12-14 12:04 IST

ಹೊಸದಿಲ್ಲಿ: ದಿಲ್ಲಿ ಸಮೀಪದ ಘಾಝಿಯಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನವ ದಂಪತಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ.

ವರನು ಎರಡು ಗುಂಡು ಸುತ್ತು  ಹಾರಿಸುತ್ತಿದ್ದಾಗ ವಧು ನಗುತ್ತಾಪೋಸ್ ನೀಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ದಿಲ್ಲಿ ಸಮೀಪದ ಘಾಝಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಸಂಭ್ರಮಾಚರಣೆಯ ಗುಂಡು ಹಾರಿಸುವುದು ಸರ್ವೇ ಸಾಮಾನ್ಯವಾಗಿದೆ. ಆದರೂ ಆಗಾಗ್ಗೆ ಸಾವುನೋವುಗಳು ಮತ್ತು ಪೊಲೀಸ್ ಕ್ರಮಗಳು ಸಂಭವಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News