ಪ್ರಧಾನಿ, ಹಣಕಾಸು ಸಚಿವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ, ಬೆಲೆಯೇರಿಕೆಗೆ ಕೇಂದ್ರ ಹೊಣೆ:ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ
Update: 2021-12-14 13:36 IST
ಮಥುರಾ:ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸೋಮವಾರ ಇಲ್ಲಿ ಕೇಂದ್ರದಲ್ಲಿರುವ ತಮ್ಮ ಪಕ್ಷದ ಸರಕಾರವನ್ನು ಟೀಕಿಸಿದ್ದು, ಪ್ರಧಾನಿ ಅಥವಾ ಹಣಕಾಸು ಸಚಿವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆ ಎಂದು ಆರೋಪಿಸಿದ ಸ್ವಾಮಿ, ಸೀತಾರಾಮನ್ ಅವರು ಯಾರನ್ನೂ ಸಂಪರ್ಕಿಸುವುದಿಲ್ಲ ಎಂದು ದೂರಿದರು.
“ಸರಕಾರಕ್ಕೆ ಅರ್ಥಶಾಸ್ತ್ರ ಅರ್ಥವಾಗುತ್ತಿಲ್ಲ, ಪ್ರಧಾನಿ ಅಥವಾ ಹಣಕಾಸು ಸಚಿವರಿಗೆ ಅರ್ಥಶಾಸ್ತ್ರ ತಿಳಿದಿಲ್ಲ”ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಬೆಳವಣಿಗೆ ದರ ಕುಸಿದಿದ್ದರೂ ಏನು ಮಾಡಬೇಕೆಂದು ಅವರಿಗೆ ತಿಳಿಯುತ್ತಿಲ್ಲ ಎಂದು ಸಂಸದರು ಹೇಳಿದರು.